Saturday, October 19, 2024
Google search engine
Homeಮುಖಪುಟಉತ್ತರ ಪ್ರದೇಶ - ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶ – ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

13 ವರ್ಷದ ಅಪ್ರಾಪ್ತ ದಲಿತ ಬಾಲಕಿಯನ್ನುಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಸಂತ್ರಸ್ತೆ ಆ ನಾಲ್ವರ ವಿರುದ್ಧ ದೂರು ನೀಡಲು ಠಾಣೆಗೆ ಹೋದಾಗ ಸ್ಟೇಷನ್ ಹೌಸ್ ಆಫೀಸರ್ ಆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಅಪಹರಣಕ್ಕೊಳಗಾದ ಬಾಲಕಿಯನ್ನು ಮಧ್ಯಪ್ರದೇಶದ ಭೋಪಾಲ್ ಗೆ ಕರೆದೊಯ್ದ ನಾಲ್ವರು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಪೊಲೀಸರು ಆಕೆಯ ಚಿಕ್ಕಮ್ಮ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ಸ್ಟೇಷನ್ ಹೌಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಚಿಕ್ಕಮ್ಮ ಮತ್ತು ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಇತರ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ಲಿಲಿತ್ ಪುರದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪಾಠಕ್ ಹೇಳಿದ್ದಾರೆ. ಸಂತ್ರಸ್ತೆ ಮೊದಲ ಬಾರಿಗೆ ಪೊಲೀಸ್ ಠಾಣೆಗೆ ಬಂದಾಗ ಅತ್ಯಾಚಾರ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂಬುದನ್ನು ಕಂಡುಹಿಡಿಯುವುದು ತನಿಖೆಯ ಭಾಗವಾಗಿದೆ ಎಂದು ಪಾಠಕ್ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಏಪ್ರಿಲ್ 26ರಂದು ಪುರುಷರು ಸ್ಥಲೀಯ ಪೊಲೀಸ್ ಠಾಣೆಯಲ್ಲಿ ಬಾಲಕಿಯನ್ನು ಬಿಟ್ಟು ಹೋಗಿದ್ದರು ಮತ್ತು ಆಕೆಯನ್ನು ಆಕೆಯ ಚಿಕ್ಕಮ್ಮನಿಗೆ ಒಪ್ಪಿಸಲಾಯಿತು. ಒಂದು ದಿನದ ನಂತರ ಪೊಲೀಸರು ಬಾಲಕಿಯನ್ನು ಠಾಣೆಗೆ ಕರೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಆ ದಿನ ಸಂಜೆ ಬಾಲಕಿಯ ಚಿಕ್ಕಮ್ಮ ಆಕೆಯನ್ನು ಠಾಣೆಯ ಅಧಿಕಾರಿಯ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮತ್ತೊಮ್ಮೆ ಬಾಲಕಿಯನ್ನು ಆಕೆಯ ಚಿಕ್ಕಮ್ಮನಿಗೆ ಒಪ್ಪಿಸಲಾಗಿದೆ ಮತ್ತು ಆಕೆಯ ಪೋಷಕರಿಗೆ ಮಾಹಿತಿ ನೀಡಿಲ್ಲ. ಏಪ್ರಿಲ್ 30ರಂದು ಪೊಲೀಸರು ಬಾಲಕಿಯನ್ನು ಚೈಲ್ಡ್ ಲೈನ್ ತಂಡಕ್ಕೆ ಸಮಾಲೋಚನೆಗಾಗಿ ಹಸ್ತಾಂತರಿಸಿದರು. ಆಗ ಆ ಬಾಲಕಿ ತನಗಾದ ಅತ್ಯಾಚಾರದ ಮಾಹಿತಿಯನ್ನು ವಿವರಿಸಿದ್ದಾಳೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular