Wednesday, December 4, 2024
Google search engine
Homeಮುಖಪುಟಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಸಚಿವ ಅಶ್ವತ್ಥನಾರಾಣ ಮುಂದು - ಡಿಕೆಶಿ ಆರೋಪ

ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಸಚಿವ ಅಶ್ವತ್ಥನಾರಾಣ ಮುಂದು – ಡಿಕೆಶಿ ಆರೋಪ

ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮುಂದಾಗಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಅಶ್ವತ್ಥ ನಾರಾಯಣ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಅವರು ರಾಮನಗರವನ್ನು ಕ್ಲೀನ್ ಮಾಡುತ್ತೇವೆ ಎಂದಿದ್ದರು. ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ಇಲಾಖೆ ಕುಲಸಚಿವರ ನೇಮಕ ವಿಚಾರವಾಗಿ ಗೊಂದಲ ಸೃಷ್ಟಿಸಿದ್ದರು. ಅವರ ನೇಮಕ ಮಾಡಿದ್ದು ಯಾರು. ಇನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದ ಬಗ್ಗೆ ಶಿಕ್ಷಣ ಇಲಾಖೆಯೇ ದೂರು ನೀಡಿದೆ. ಹೀಗಾಗಿ ಎಲ್ಲಾ ಅಕ್ರಮಗಳಿಗೆ ಅವರೇ ಪಿತಾಮಹಾ ಅಲ್ಲವೇ ಎಂದು ಪ್ರಶ್ನಿಸಿದರು.

ಯತ್ನಾಳ್ ಅವರು ಕೆಪಿಎಸ್.ಸಿ ಸದಸ್ಯರು ಹಾಗೂ ಅಧ್ಯಕ್ಷರ ನೇಮಕಕ್ಕೆ ಹಣ ನೀಡಿದ್ದಾರೆ ಎಂದೆಲ್ಲಾ ಹೇಳಿದ್ದಾರೆ. ವಿಶ್ವನಾಥ್ ಅವರು ಟೆಂಡರ್ ನೀಡುವ ಮೊದಲು ಕಿಮಿಷನ್ ಪರ್ಸೆಂಟೇಜ್ ನಿಗದಿಯಾಗಿದೆ ಎಂದು ಹೇಳಿದ್ದಾರೆ. ಅವರಿಗೂ ನೋಟಿಸ್ ನೀಡಲಿ. ಯತ್ನಾಳ್ ಹಾಗೂ ವಿಶ್ವನಾಥ್ ಅವರು ಹೇಗೆ ವಿಧಾನ ಮಂಡಲದ ಗೌರವಾನ್ವಿತ ಸದಸ್ಯರೋ ಅದೇ ರೀತಿ ಪ್ರಿಯಾಂಕ್ ಖರ್ಗೆ ಸದಸ್ಯರು. ಅವರಿಗೆ ನೋಟೀಸ್ ನೀಡದವರು, ಇವರಿಗೆ ಮಾತ್ರ ಯಾಕೆ ನೀಡುತ್ತಿದ್ದಾರೆ ಎಂದು ಕೇಳಿದರು.

ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್ ಜಾರಿ ಮಾಡಿರುವವರು ಮೊದಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ನೋಟೀಸ್ ನೀಡಬೇಕು. ಸದನದಲ್ಲಿ ಬೇರೆ ಬೇರೆ ಪಕ್ಷದ ನಾಯಕರು ಈ ನೇಮಕಾತಿ ಅಕ್ರಮ ವಿಚಾರವಾಗಿ ಪ್ರಶ್ನೆ ಕೇಳಿದಾಗ ಯಾವುದೇ ಅಕ್ರಮ ನಡೆದಿಲ್ಲ ಎಂದು ಐದು ಬಾರಿ ಉತ್ತರಿಸಿರುತ್ತಾರೆ. ಆದರೂ ಆರೋಪಿಗಳನ್ನು ಬಂಧಿಸಿ ಜೈಲಿಗೆ ಹಾಕಿ ಎಫ್ಐಆರ್ ದಾಖಲಿಸಲಾಗುತ್ತದೆ. ಹಾಗಾದರೆ ಗೃಹ ಸಚಿವರು ಹೇಳಿದ್ದು ಸುಳ್ಳಲ್ಲವೇ ಎಂದರು.

ದಲಿತ ನಾಯಕನ ಮೇಲೆ ದೌರ್ಜನ್ಯ ಮಾಡಿ ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದ್ದೀರಾ? ಪ್ರಿಯಾಂಕ್ ಖರ್ಗೆ ಅವರು ಪಕ್ಷದ ಪ್ರತಿನಿಧಿಯಾಗಿದ್ದು, ಅವರನ್ನು ಯಾವಾಗ ವಿಚಾರಣೆಗೆ ಕಳುಹಿಸಬೇಕು ಎಂದು ನಮಗೆ ಗೊತ್ತಿದೆ. ಆ ಬಗ್ಗೆ ನಾವು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಸಚಿವ ಅಶ್ವತ್ಥನಾರಾಯಣ್ ಅವರು ನನ್ನ ವಿರುದ್ಧ ಏಕವಚನದಲ್ಲಿಯಾದರೂ ಮಾತನಾಡಲಿ, ಬಹುವಚನದಲ್ಲಾದರೂ ಮಾತನಾಡಲಿ, ಆದರೆ ರಾಜ್ಯದ ಯುವಕರು ಕಷ್ಟಪಟ್ಟು ಓದಿ ಪ್ರಾಮಾಣಿಕವಾಗಿ ಕೆಸಲ ಪಡೆಯಲು ಮುಂದಾದವರಿಗೆ ಅನ್ಯಾಯ ಆಗುತ್ತಿರುವುದಕ್ಕೆ ಬೇಸರವಾಗುತ್ತಿದೆ ಎಂದು ವ್ಯಂಗ್ಯವಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular