ಕಾರು ಮತ್ತು ಟಿಟಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಅಪಘಾತದಲ್ಲಿ ಸಂತೋಷ್ ಮತ್ತು ರಘು ಮೃತಪಟ್ಟಿದ್ದು ಅವರನ್ನು ಬೆಂಗಳೂರಿನ ಸಂಜಯನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಟಿಟಿ ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಕಾರು ಬೆಂಗಳೂರಿಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಕುಣಿಗಲ್ ಸಮೀಪ ಬರುತ್ತಿದ್ದಂತೆಯೇ ಅಪಘಾತ ಸಂಭವಿಸಿದೆ.
ಟಿಟಿ ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದ. ಹೀಗಾಗಿ ಟಿಟಿ ಡಿವೈಡರ್ ಗೆ ಗುದ್ದಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು ಕೆಲವರು ಗಾಯಗೊಂಡಿದ್ದಾರೆ.
ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


