ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಹೋಟೆಲ್ ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ.
ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಇಡೀ ಹೋಟೆಲ್ ಸುಟ್ಟು ಕರಕಲಾಗಿದೆ.
ಕಳೆದ ಮಧ್ಯರಾತ್ರಿ ಹೋಟೆಲ್ ನಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದರೂ ಯಾರ ಅರಿವಿಗೆ ಬಂದಿಲ್ಲ. ಜೊತೆಗೆ ಹೋಟೆಲ್ ನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ದೊಡ್ಡ ಮಟ್ಟದ ದುರಂತ ತಪ್ಪಿದಂತಾಗಿದೆ.
ನಿರಂತರವಾಗಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡು ಗೌರಮ್ಮ ಹೋಟೆಲ್ ಸುಟ್ಟು ಹೋಗಿದೆ. ಹೋಟೆಲ್ ನಲ್ಲಿದ್ದ ಫ್ರಿಜ್, ಪಾತ್ರೆಗಳು ಮತ್ತು ದಿನಸಿ ವಸ್ತುಗಳು ಮತ್ತು ಅಡುಗೆ ಸಾಮಾನುಗಳು ಸುಟ್ಟು ಕರಕಲಾಗಿವೆ
ಬೆಂಕಿ ದುರಂತದಿಂದ 10 ಲಕ್ಷ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.