Thursday, January 29, 2026
Google search engine
Homeಮುಖಪುಟಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಗೆ ಸಿದ್ದರಾಮಯ್ಯ ಸ್ವಾಗತ

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಗೆ ಸಿದ್ದರಾಮಯ್ಯ ಸ್ವಾಗತ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲಿದ್ದ ಅಬಕಾರಿ ಸುಂಕಕ್ಕೆ ಸಮನಾಗಿ ತೆರಿಗೆ ಕಡಿತ ಮಾಡಬಹುದು ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ.

ಯುಪಿಎ ಸರರ್ಕಾರದ ಕೊನೆ ಅವಧಿಯಲ್ಲಿ ಡೀಸೆಲ್ ಮೇಲೆ ರೂ.3.45 ಹಾಗೂ ಪೆಟ್ರೋಲ್ ಮೇಲೆ ರೂ.9.20 ಅಬಕಾರಿ ಸುಂಕ ಇತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಡೀಸೆಲ್ ಮೇಲೆ 31.84 ರೂ ಹಾಗೂ ಪೆಟ್ರೋಲ್ ಮೇಲೆ ರೂ.32.98 ತೆರಿಗೆ ಏರಿಸಲಾಗಿತ್ತು ಎಂದಿದ್ದಾರೆ.

ಪೆಟ್ರೊಳ್ ಮತ್ತು ಡೀಸೆಲ್ ಮೇಲಿನ ತೆರಿಗೆ ಒಂದರಲ್ಲೇ ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರ 23 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಹೇಳಿದ್ದಾರೆ.

ಕೊರೊನಾ ಆರ್ಭಟದ ನಂತರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಜನ ಸಾಮಾನ್ಯರಿಗೆ ಈ ತೆರಿಗೆ ಕಡಿತ ಕೊಂಚ ನಿರಾಳತೆ ಉಂಟು ಮಾಡಿದೆ. ಆದರೆ ಪೂರ್ಣ ಪ್ರಮಾಣದ್ದಲ್ಲ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular