Friday, October 18, 2024
Google search engine
Homeಮುಖಪುಟನನ್ನ ಕಥನ ಪಠ್ಯಪುಸ್ತಕದಲ್ಲಿ ಸೇರಿಸದಿದ್ದರೆ ಬಹಳ ಸಂತೋಷ - ದೇವನೂರು ಮಹಾದೇವ ಪತ್ರ

ನನ್ನ ಕಥನ ಪಠ್ಯಪುಸ್ತಕದಲ್ಲಿ ಸೇರಿಸದಿದ್ದರೆ ಬಹಳ ಸಂತೋಷ – ದೇವನೂರು ಮಹಾದೇವ ಪತ್ರ

ಪಠ್ಯ ಪರಿಷ್ಕರಣೆಯ ವಾದ-ವಿವಾದಗಳು ನಡೆಯುತ್ತಿದೆ. ಹತ್ತನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ್ರ ಉಂಟು ಅಂತ, ಕೆಲವು ಸಲ ಸೇರಿದನ್ನು ಕೈಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆಗಳಿಗೆಗೂ ಬದಲಾಗುತ್ತಿದೆ. ಇರಲಿ ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಶ ವಾಗುತ್ತದೆ ಎಂದು ಹಿರಿಯ ಸಾಹಿತಿ ದೇವನೂರು ಮಹದೇವ ಹೇಳಿದ್ದಾರೆ.

ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟ ಪಡಿಸುವುದಕ್ಕಗಿ ಈ ಪ್ರಕಟಣೆ ನೀಡುತ್ತಿದ್ದೇನೆ, ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ, ಎಂತಲೇ ಅರ್ಥ.

(೨) ಪಠ್ಯಪುಸ್ತಳ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ, ಅವರವರ ಅಡಿಗೆ ಮನ ವಾಸನೆ ಪ್ರಿಯವಾಗುವಂತೆ ಹೀಗಾಗಿ ಭಾರತದ ಬಹುತ್ಯ, ಪಾರ್ಟಿಸಿಪೇಟು ಪುಜಾಪುಭುತ ಕಣ್ಮರೆಯಾಗುತ್ತಿದೆ.

ಇದು ಈಗಿನದಲ್ಲಿ ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದ, ಚಾತುರ್ವಣ್ರ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ ಇಲೂ ಇದೇ ಆಗಿದೆ.

ಈ ಪಠ್ಯಗಳೆಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸ್ ಆಪ್, ಇ ಮೇಲ್, ಅನ್ಸನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

ದೇವನೂರು ಮಹಾದೇವ, ಹಿರಿಯ ಸಾಹಿತಿಗಳು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular