Monday, December 23, 2024
Google search engine
Homeಮುಖಪುಟಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ - ಬಿಜೆಪಿ ವಿರುದ್ದ ಡಿಕೆ ಶಿವಕುಮಾರ್ ವಾಗ್ದಾಳಿ

ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ – ಬಿಜೆಪಿ ವಿರುದ್ದ ಡಿಕೆ ಶಿವಕುಮಾರ್ ವಾಗ್ದಾಳಿ

ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಪಠ್ಯ ಪರಿಷ್ಕರಣೆಯ ಬಗ್ಗೆ ಪರ-ವಿರೋಧಗಳು ಕೇಳಿ ಬರುತ್ತಿವೆ. ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ಖಂಡಿಸಿದ್ದಾರೆ.

ದೇಶ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅಡಿಪಾಯ. ಆದರೆ ಪ್ರಸ್ತುತ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ. ನೈಜ ಇತಿಹಾಸವನ್ನು ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸವನ್ನು ನೀಡುವ ಕಾರ್ಯದಲ್ಲಿ ಮಗ್ನವಾಗಿದೆ. ಆರ್.ಎಸ್.ಎಸ್.ನ ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದು ಹೇಳಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲೂ ಬಿಜೆಪಿ ಎಲ್ಲರ ವಿರೋಧವನ್ನು ಎದುರಿಸುತ್ತಿದೆ. ಬಿಸಿಯೂಟ ಯೋಜನೆ ಹಳ್ಳ ಹಿಡಿದಿದೆ. ಶಾಲೆಗಳಲ್ಲಿ ಮೂಲಸೌಕರ್ಯವಿಲ್ಲ. ಇದರ ನಡುವೆ ಎನ್ಇಪಿ ಹೆಸರಿನಲ್ಲಿ ನಾಗ್ಪುರ ಶಿಕ್ಷಣ ನೀತಿ ಜಾರಿಗೆ ತರುವ ಧಾವಂತಕ್ಕೆ ರಾಜ್ಯ ಸರ್ಕಾರ ಬಿದ್ದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಶಿಕ್ಷಣ ಕ್ಷೇತ್ರವನ್ನು ಮತ್ತೆ ಸರಿಯಾದ ದಾರಿಗೆ ತರುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು,, ಸಾಹಿತಿಗಳು, ಚಿಂತಕರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ವರ್ಗದವರು ಧ್ವನಿಗೂಡಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಶಿಕ್ಷಣವು ಮಕ್ಕಳ ಭವಿಷ್ಯಕ್ಕೆ ಒಂದು ಅಡಿಪಾಯ. ಅಡಿಪಾಯವು ಎಂದಿಗೂ ಅಲುಗಾಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular