ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲದಿದ್ದರೆ ಭಾರತೀಯ ಜನತಾ ಪಕ್ಷವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಅಧಿಕಾರಕ್ಕಾಗಿ ಹೋರಾಟ ಮಾಡಲಿಲ್ಲ. ಜನರ ಪರವಾಗಿ ಹೋರಾಡಿದರು ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನ ಹೊರಹಾಕಿರುವ ಬಿ.ವೈ.ರಾಘವೇಂದ್ರ ಪಕ್ಷದ ವಿರುದ್ಧವೇ ಮಾತನಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರ ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿ.ವೈ.ರಾಘವೇಂದ್ರ ಯಾರೂ ಕೂಡ ನನ್ನ ಪರವಾಗಿ ಜಯಕಾರ ಹಾಕಬಾರದು ಎಂದು ಹೇಳುವ ಮೂಲಕ ವರಿಷ್ಠರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.
ಅಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಘವೇಂದ್ರ ಅವರ ಕುರಿತು ಯಾವುದೇ ಮಾತನಾಡಿರಲಿಲ್ಲ. ಆದರೂ ವಿಜಯೇಂದ್ರ ವಿಧಾನಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ವಿಜಯೇಂದ್ರ ಪಕ್ಷದ ಮುಖಂಡರ ವಿರುದ್ಧ ಸಿಟ್ಟನ್ನು ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.