ಬೆಂಗಳೂರಿನ ಗಾಂಧೀ ಭವನದಲ್ಲಿ ನಡೆಯುತ್ತಿದ್ದ ರೈತ ಸಂಘದ ಸಮಾಲೋಚನ ಸಭೆಗೆ ನುಗ್ಗಿದ ದುಷ್ಕರ್ಮಿಗಳು ರೈತ ಮುಖಂಡರಾದ ರಾಕೇಶ್ ಟಿಕಾಯತ್, ಅನಸೂಯಮ್ಮ ಮತ್ತು ಚುಕ್ಕಿ ನಂಜುಂಡಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿ ಮಸಿ ಬಳಿದಿರುವ ಘಟನೆ ನಡೆದಿದೆ.
ದುಷ್ಕರ್ಮಿಗಳ ಗುಂಪು ಮೋದಿ ಮೋದಿ ಎಂದು ಕೂಗುತ್ತಾ ವೇದಿಕೆಯತ್ತ ನುಗ್ಗಿದೆ. ಅಷ್ಟೇ ಅಲ್ಲ ವೇದಿಕೆಯಲ್ಲಿ ಕುಳಿತಿದ್ದ ಆ ಗುಂಪು ಸಿಕ್ಕ ಸಿಕ್ಕಿದವರಿಗೆ ಮಸಿ ಬಳಿದರು ಎಂದು ಮಾಧ್ಯಮಗಳು ವರದಿ ಮಾಡಿದೆ.
ವೇದಿಕೆಯಲ್ಲಿದ್ದ ಮುಖಂಡರ ಮೇಲೆ ಹಲ್ಲೆಯೂ ನಡೆಸಿದೆ. ಅಲ್ಲಿಯೇ ಇದ್ದ ಪೊಲೀಸರು ಇದನ್ನು ನೋಡಿಯೂ ನೋಡದಂತೆ ಮೂಕ ಪ್ರೇಕ್ಷಕರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದುಷ್ಕರ್ಮಿಗಳು ಹಲ್ಲೆ ನಡೆಸಿ ಮಸಿ ಬಳಿದ ಮೇಲೆ ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆಯ ಭರತ್ ಶೆಟ್ಟಿ, ದಿಲೀಪ್ ಮತ್ತು ಶಿವಕುಮಾರ್ ಎಂಬುವರನ್ನು ಬಂಧಿಸಿದರು ಎಂದು ಹೇಳಲಾಗಿದೆ.