Monday, December 23, 2024
Google search engine
Homeಮುಖಪುಟರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪಾ ನಾಗರಾಜಯ್ಯ ರಾಜಿನಾಮೆ

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪಾ ನಾಗರಾಜಯ್ಯ ರಾಜಿನಾಮೆ

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿರುದ್ಧ ಸಾಹಿತಿಗಳ ವಿರೋಧ ಮುಂದುವರೆದಿದ್ದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜಿನಾಮೆ ನೀಡಿದ್ದಾರೆ.

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳನ್ನು ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಮತ್ತು ಕರ್ನಾಟಕಕ್ಕೂ ಮಹಾಕವಿ ಕುವೆಂಪು ಅವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದವರಲ್ಲಿ ಮೊದಲಿಗರು ಎಂದು ಹೇಳಿದ್ದಾರೆ.

ಇದನ್ನು ಅರಿತು ರಾಜ್ಯ ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಪ್ರಾರಂಭಿಸಿತಲ್ಲದೆ, ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದು ಹೇಳಿದ್ದಾರೆ.

ಆದರೆ ಇಂದು ಕುವೆಂಪುರವನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇವರಿಂದು ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರ್ಕಾರ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತೆ ಆಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಕವಿ ಕುವೆಂಪುರವರನ್ನು ನಮ್ಮ ಪವಿತ್ರ ನಾಡಗೀತೆಯನ್ನು ಅಪಮಾನಿಸುತ್ತಿದ್ದರೂ ನೋಡಿಕೊಂಡು ತಪ್ಪೆಸಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜಿನಾಮೆಯನ್ನು ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಹಂಪಾ ನಾಗರಾಜಯ್ಯ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular