Monday, December 23, 2024
Google search engine
Homeಮುಖಪುಟಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರದ್ದುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರದ್ದುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ

ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿಕ್ಷಣ ಸಚಿವ ನಾಗೇಶ್ ಹಾಗೂ ಬಿಜೆಪಿ ಸರ್ಕಾರ ಪಠ್ಯಪುಸ್ತಕ ವಿಚಾರವಾಗಿ ರಾಜ್ಯದಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದು, ಇತಿಹಾಸವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಯಾವುದೇ ಸಮಿತಿಯ ಅಧ್ಯಕ್ಷರಾದವರು ತಮ್ಮದೇ ಆದ ವರ್ಚಸ್ಸು ಇಟ್ಟುಕೊಂಡಿರಬೇಕು. ಆದರೆ ಆ ವ್ಯಕ್ತಿಗೆ ಕನ್ನಡ ಭಾಷೆ, ಬಾವುಟದ ಬಗ್ಗೆಯೇ ಗೌರವವಿಲ್ಲ. ರಾಷ್ಟ್ರಕವಿ ಕುವೆಂಪು ಅವರ ಆಚಾರ, ವಿಚಾರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಪ್ಪಿ ಅವರಿಗೆ ಎಲ್ಲಾ ರೀತಿಯ ಗೌರವಗಳನ್ನು ನೀಡಿವೆ. ಅವರ ನಾಡಗೀತೆ ಮೂಲಕ ನಾವು ನಮ್ಮ ನಾಡಿನ ಬಗ್ಗೆ ಮುಂದಿನ ಪೀಳಿಗೆಗೆ ಮನದಷ್ಟು ಮಾಡಿಕೊಡುತ್ತಿದ್ದೇವೆ. ಅಂತಹವರ ಬಗ್ಗೆ ಈ ವ್ಯಕ್ತಿ ಅವಹೇಳನಕಾರಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.

ಕುವೆಂಪು ಅವರ ಬಗ್ಗೆ ಕನಿಷ್ಠ ಪ್ರೀತಿ, ಗೌರವ ಇಟ್ಟುಕೊಂಡಿರಬೇಕು. ನಮ್ಮ ರಾಜ್ಯದ ಕವಿಗಳಿಗೆ ಅಪಮಾನ ಮಾಡಿರುವುದು ಹಾಗೂ ರಾಜ್ಯದ ಇತಿಹಾಸವನ್ನು ತಿರುಚುತ್ತಿರುವುದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಈ ರಾಜ್ಯದ ಸಾಹಿತಿಗಳು, ಸಂಘಟನೆಗಳು, ಶಿಕ್ಷಕರು, ವಿದ್ಯಾರ್ತಿಗಳು ಈ ವಿಚಾರವಾಗಿ ದನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೂಡಲೇ ರದ್ದು ಮಾಡಿ ಈ ಹಿಂದಿನ ವರ್ಷಗಳಲ್ಲಿ ಇದ್ದ ಪಠ್ಯವನ್ನೇ ಯಾವುದೇ ಬದಲಾವಣೆ ಮಾಡದೇ ಈ ವರ್ಷವೂ ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನು ಓದಿಕೊಂಡೆ ಅನೇಕರು ವಿದ್ಯಾವಂತರಾಗಿದ್ದಾರೆ. ನಮಗೆ ಜ್ಞಾನ , ಮಾತನಾಡುವ ಶಕ್ತಿಯನ್ನು ಕೊಟ್ಟಿರುವ ಹಿರಿಯರ ಮಾರ್ಗದರ್ಶನ ಹೊಂದಿರುವ ಪಠ್ಯಪುಸ್ತಕವನ್ನು ಬದಲಿಸಲು ಮುಂದಾಗಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.

ನೀವು ಇಷ್ಟು ಪ್ರಮಾಣದಲ್ಲಿ ಮಾತನಾಡಲು ಶಕ್ತಿ ಕೊಟ್ಟಿರುವುದು ಇದೇ ಪಠ್ಯ ಪುಸ್ತಕಗಳಲ್ಲವೇ? ಇದನ್ನು ಯಾವ ಕಾರಣಕ್ಕೆ ಬದಲಿಸಲು ಪ್ರಯತ್ನಿಸುತ್ತಿದ್ದೀರಿ. ಇವರ ಈ ಪ್ರಯತ್ನ ನೋಡಿದರೆ ನಮ್ಮ ಇತಿಹಾಸದ ಬಗ್ಗೆ ನಮಗೆ ಅನುಮಾನ ಮೂಡುವಂತೆ ಮಾಡುತ್ತಿದೆ. ಹೀಗಾಗಿ ಪಠ್ಯ ಬದಲಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular