ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಇದೊಂದು ದುಷ್ಕೃತ್ಯ ಮುಖ್ಯಮಂತ್ರಿಗಳೇ ನೆನಪಿರಲಿ ಎಂದು ಹೇಳಿದ್ದಾರೆ.
ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ತಿಳಿಸಿದ್ದಾರೆ.
ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರು ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಹನೆ, ಸಜ್ಜನಿಕೆಗೆ ಹಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ದೂರಿದ್ದಾರೆ.