Friday, October 18, 2024
Google search engine
Homeಮುಖಪುಟಮನೆಕೆಲಸದ ಹೆಣ್ಣುಮಕ್ಕಳು ಎಂಬ ಪಠ್ಯದ ಅನುಮತಿ ಹಿಂಪಡೆದ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ

ಮನೆಕೆಲಸದ ಹೆಣ್ಣುಮಕ್ಕಳು ಎಂಬ ಪಠ್ಯದ ಅನುಮತಿ ಹಿಂಪಡೆದ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ

ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣದ ಮೇಲಿನ ಕೋಮುವಾದೀಕರಣವನ್ನು ನೋಡಿದರೆ ಆತಂಕ ಮತ್ತು ಭಯ ಉಂಟಾಗುತ್ತಿದೆ ಎಂದು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಪಠ್ಯ ಪರಿಷ್ಕರಣೆಯ ಅಸಂವಿಧಾನಿಕ ನಡವಳಿಕೆಗಳು ಶೈಕ್ಷಣಿಕ ವಾತಾವರಣವನ್ನು ಅನಾರೋಗ್ಯಕರ ಬೆಳವಣಿಗೆಗಳಾಗಿವೆ. ಕನ್ನಡ ಪರಂಪರೆಗೆ ದುಡಿದ ಮಹನೀಯರಿಗೆ ಕನ್ನಡ ಪರಂಪರೆಗೆ ಧಕ್ಕೆ ಎಸಗುತ್ತಿರುವುದು, ಅಗೌರವ ತೋರಿದ ನಡವಳಿಕೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕಕ್ಕೆ ಎಸಗಿದ ದ್ರೋಹ ಕೃತ್ಯವಾಗಿದೆ ಎಂಬುದನ್ನು ವಿನಯದಲ್ಲಿ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿ ನನ್ನ ಒಂದು ಕವಿತೆ ಮನೆಕೆಲಸದ ಹೆಣ್ಣುಮಕ್ಕಳು 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ನಾನು ಹಿಂಪಡೆದಿದ್ದೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ:

ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ, ಸಂಸ್ಕೃತಿ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಳಿಕೆಯನ್ನು ಅವರು ಖಂಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಅಸಂವಿಧಾನಿಕ ದಬ್ಬಾಳಿಕೆಗಳಿಂದ ಆತಂಕ ಮತ್ತು ಭಯ ಉಂಟಾಗಿದೆ. ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತ ಆಟೋಟಾಪ ಮೆರೆಯುತ್ತಾ ಪ್ರಜಾಪ್ರಭುತ್ವದ ಒಕ್ಕುಟ ವ್ಯವಸ್ಥೇಗೆ ಧಕ್ಕೆ ಉಂಟುಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಅವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಇನ್ನೂ ಹೆಚ್ಚಿನ ಆತಂಕ ಉಂಟಾಗಿದೆ. ಇದರಿಂದ ಬೇಸತ್ತು ನಾವು ರಾಜಿನಾಮೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ರಾಜಿನಾಮೆ ಒಪ್ಪಿಕೊಂಡು ಕೂಡಲೇ ನಮ್ಮನ್ನು ಕಾರ್ಯಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ಸಿದ್ದರಾಮಯ್ಯ, ಸದಸ್ಯರಾದ ಡಾ.ಎಚ್.ಎಸ್.ರಾಘವೇಂದ್ರ ರಾವ್, ಡಾ.ಚಂದ್ರಶೇಖರ ನಂಗಲಿ, ಡಾ.ನಟರಾಜ ಬೂದಾಳ ಕೂಡ ರಾಜಿನಾಮೆ ಪತ್ರಕ್ಕೆ ಸಹಿ ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular