ಉತ್ತರ ಪ್ರದೇಶದ ಹಾಪುರ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಆವಘಡ ಸಂಭವಿಸಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಸ್ಥಳದಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಕಾರ್ಖಾನೆಯು ಹಾಪುರ್ ನ ಧೌಲಾನ ಪ್ರದೇಶದಲ್ಲಿ ಉತ್ತರ ಪ್ರದೇಶ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಸ್ಥಳದಲ್ಲಿದೆ. 20ಕ್ಕೂ ಹೆಚ್ಚು ಅಗ್ನಿಸಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಾರ್ಖಾನೆಗೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿಸಿಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.