Thursday, November 21, 2024
Google search engine
Homeಮುಖಪುಟಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ - ಸಿದ್ದರಾಮಯ್ಯ ಆಕ್ರೋಶ

ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ – ಸಿದ್ದರಾಮಯ್ಯ ಆಕ್ರೋಶ

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗ ಪಡಿಸಿದ್ದಾರೆ. ಈ ಹಿಂದೂಗಳು ಯಾರು ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗಪಡಿಸಿ ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಢ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವ ಸಚಿವರೇ ಎಂದು ಪ್ರಶ್ನಿಸಿದ್ದಾರೆ.

ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಸಚಿವರೇ ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಢ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಎಂದು ಹೇಳಿದ್ದಾರೆ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವ ಹಿಂದೂ ಧರ್ಮದಲ್ಲಿರುವ ದಲಿತರು ಮತ್ತು ಹಿಂದುಳಿದ ಜಾತಿಗಳು, ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು, ಬುದ್ದ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ೀ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ ಎಂದು ಪ್ರಶ್ನಿಸಿದ್ದಾರೆ.

ವಿಕೃತ ಮನಸ್ಸಿನ ಕಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ. ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular