ತನ್ನ 13 ವರ್ಷದ ಮಲಮಗಳು ಮತ್ತು ಆತನ ಪತ್ನಿಯ ಸಹೋದರಿಯನ್ನು ಲೈಂಗಿಕ ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಸಬ್ ಇನ್ಸ್ ಪೆಕ್ಟರ್ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯ ಎರಡನೇ ಪತ್ನಿ ಬೆಂಗಳೂರಿನ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆರೋಪಿಯ ವಿರುದ್ದ ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪತಿ ತನ್ನನ್ನು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.
ಮಹಿಳೆ ತನ್ನ ಮೊದಲ ಪತಿ ವಿರುದ್ಧ ದೂರು ದಾಖಲಿಸುವ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಸಬ್ ಇನ್ಸ್ ಪೆಕ್ಟರ್ ಅವರನ್ನು ಮೊದಲು ಭೇಟಿಯಾಗಿದ್ದಾರೆ ಎಂದು ಹೇಳಲಾಗಿದೆ.
ಆರೋಫಿಯು ಸೇವೆಯಲ್ಲಿರುವ ಪೊಲೀಸ್ ಅಧಿಕಾರಿಯಾಗಿದ್ದು ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿಯೋಜಿತರಾಗಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ಇಂಡಿಯಾ.ಕಾಮ್ ವರದಿ ಮಾಡಿದೆ.