Monday, September 16, 2024
Google search engine
HomeUncategorizedರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣೆ ಆಯೋಗ

ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣೆ ಆಯೋಗ

ಭಾರತದ ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿರುವ ಚುನಾವಣಾ ಆಯೋಗ ಜುಲೈ 18ರಂದು ಚುನಾವಣೆಗೆ ಮುಹೂರ್ತ ನಿಗದಿ ಮಾಡಿದೆ. ಜುಲೈ 21ರಂದು ಮತಗಳ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ರಂದು ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಚುನಾವಣಾ ವೇಳಾಪಟ್ಟಿಯಂತೆ ಜೂನ್ 15ರಂದು ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಜುಲೈ 2ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಜುಲೈ 18ರಂದು ಮನದಾನ ನಡೆಯಲಿದ್ದು ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಈ ಚುನಾವಣೆಗೆ ಚುನಾವಣಾಧಿಕಾರಿಯಾಗಿರುತ್ತಾರೆ.

ಭಾರತದ ರಾಷ್ಟ್ರಪತಿಯನ್ನು ಸಂಸತ್ತಿನ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಸದಸ್ಯರು ಮತ್ತು ದೆಹಲಿ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ವಿಧಾನಸಭೆಗಳ ಸದಸ್ಯರು ಆಯ್ಕೆ ಮಾಡುತ್ತಾರೆ. ಸಂಸತ್ತಿನ ನಾಮನಿರ್ದೇಶಿತ ಸದಸ್ಯರು ಮತ್ತು ರಾಜ್ಯ ವಿಧಾನಸಭೇ ಮತ್ತು ವಿಧಾನಪರಿಷತ್ತಿನ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ.

ಒಟ್ಟು 776 ಸಂಸತ್ ಸದಸ್ಯರು ಮತ್ತು 4,033 ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಒಟ್ಟು ಮತಗಳ ಮೌಲ್ಯ 10,86,431 ಆಗಿದೆ. ಶಾಸಕರ ಮತಗಳ ಮೌಲ್ಯ 5,43,231 ಮತ್ತು ಸಂಸದರ ಮತಗಳು 5,43,200 ಆಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular