ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಆರ್. ಶ್ರೀನಿವಾಸ್ ನಮ್ಮ ಅಪ್ಪ ಅಮ್ಮ ಅಷ್ಟೋ ಇಷ್ಟೋ ಓದಿಸಿದ್ದಾರೆ. ನನಗೂ ಬುದ್ದಿ ಇದೆ ಎಂದು ಹೇಳಿದ್ದಾರೆ.
ಮತ ಎಣಿಕೆ ನಡೆದ ಮೇಲೆ ಸತ್ಯಾಂಶ ಏನೆಂದು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.