ರಾಜ್ಯದಲ್ಲಿ ರಾಜ್ಯಸಭೆಯ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದರೂ ಒಬ್ಬರನ್ನು ಮಾತ್ರ ಗೆಲ್ಲಿಸಿಕೊಂಡಿದೆ.
ಬಿಜೆಪಿಯ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ಬಿಜೆಪಿ ಎಲ್ಲಾ ಮೂರು ಸ್ಥಾನಗಳನ್ನು ಗೆಲ್ಲಿಸಿಕೊಂಡಿದ್ದು ರಾಜ್ಯಸಭೆಯಲ್ಲಿ ತನ್ನ ಸದಸ್ಯರ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ.
ಕಾಂಗ್ರೆಸ್ ಇಬ್ಬರನ್ನು ಕಣಕ್ಕೆ ಇಳಿಸಿತ್ತು. ಈ ಪೈಕಿ ಜಯರಾಂ ರಮೇಶ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಎರಡನೇ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಸೋಲು ಅನುಭವಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಪರಾಭವಗೊಂಡಿದ್ದಾರೆ.