Monday, December 23, 2024
Google search engine
Homeಮುಖಪುಟಜಂಟಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಿಂದ ಹಿಂದೆ ಸರಿದ ಫಾರೂಕು ಅಬ್ದುಲ್ಲಾ

ಜಂಟಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಿಂದ ಹಿಂದೆ ಸರಿದ ಫಾರೂಕು ಅಬ್ದುಲ್ಲಾ

ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಜಂಟಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಿಂದ ಹಿಂದೆ ಸರಿದಿದ್ದಾರೆ. ಆದಾಗ್ಯೂ ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ಹೆಸರನ್ನು ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತದ ರಾಷ್ಟ್ರಪತಿ ಹುದ್ದೆಗೆ ಸಂಭವನೀಯ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕಾಗಿ ನನಗೆ ಗೌರವವಿದೆ ಎಂದು ಹೇಳಿದ್ದಾರೆ.

ಮಮತ ದೀದಿ ನನ್ನ ಹೆಸರನ್ನು ಪ್ರಸ್ತಾಪಿಸಿದ ನಂತರ ನನ್ನ ಉಮೇದುವಾರಿಕೆಗೆ ಬೆಂಬಲ ನೀಡುವಂತೆ ವಿರೋಧ ಪಕ್ಷದ ನಾಯಕರಿಂದ ನನಗೆ ಹಲವಾರು ಕರೆಗಳು ಬಂದಿವೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಅನಿರೀಕ್ಷಿತ ಬೆಳವಣಿಗೆಯ ಬಗ್ಗೆ ಅವರು ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಗಳು ಮತ್ತು ಕುಟುಂಬದವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನಾನು ಸ್ವೀಕರಿಸಿದ ಬೆಂಬಲದಿಂದ ನನಗೆ ಖುಷಿಯಾಗಿದೆ. ದೇಶದ ಅತ್ಯುನ್ನತ ಹುದ್ದೆಗೆ ಪರಿಗಣಿಸಲ್ಪಟ್ಟಿದ್ದೇನೆ. ಜಮ್ಮು ಮತ್ತು ಕಾಶ್ಮೀರವು ನಿರ್ಣಾಯಕ ಘಟ್ಟವನ್ನು ತಲುಪಿದೆ ಎಂದು ನಾನು ಭಾವಿಸಿದ್ದೇನೆ. ಈ ಅನಿಶ್ಚಿತ ಸಮಯವನ್ನು ನಿಭಾಯಿಸಲು ನನ್ನ ಪ್ರಯತ್ನಗಳ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ನನ್ನ ಮುಂದೆ ಹೆಚ್ಚು ಸಕ್ರಿಯ ರಾಜಕೀಯವನ್ನು ಹೊಂದಬೇಕು. ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಸೇವೆಯಲ್ಲಿ ಸಕಾರಾತ್ಮಕ ಕೊಡುಗೆ ನೀಡಲು ಎದುರು ನೋಡುತ್ತಿದ್ದಾರೆ ಎಂದು ಅವರು ನಂಬಿದ್ದಾರೆ.

ಆದ್ದರಿಂದ ನಾನು ಗೌರವಯುತವಾಗಿ ನನ್ನ ಹೆಸರನ್ನು ಪರಿಗಣನೆಯಿಂದ ಹಿಂತೆಗೆದುಕೊಳ್ಳಲು ಬಯಸುತ್ತೇನೆ ಮತ್ತು ಜಂಟಿ ವಿರೋಧ ಪಕ್ಷದ ಒಮ್ಮತದ ಅಭ್ಯರ್ತಿಯನ್ನು ಬೆಂಬಲಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದು ತಮಗೆ ಬೆಂಬಲ ವ್ಯಕ್ತಪಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular