- ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು 10ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದಿರಿ. ಈಗಿನ ಬಿಜೆಪಿ ಸರ್ಕಾರ 40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ ಇದಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಪ್ರಶ್ನಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಭ್ರಷ್ಟಾಚಾರದ ಬಗ್ಗೆ ಮೌನ ವಹಿಸಿರುವುದು ಏಕೆ ಎಂದು ಕೇಳಿದ್ದಾರೆ.
- ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಆರೋಗ್ಯ ಇಲಾಖೆ ಸೇರಿ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ನಿಮಗೆ ನಿಮ್ಮ ಸಚಿವರ ಭ್ರಷ್ಟಾಚಾರ ಕಾಣಿಸುತ್ತಿಲ್ಲವೇ?
3. 2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ನೀವು ಹೇಳಿದ್ದ ಮಾತು ನೆನಪಿದೆಯೇ? ರೈತರ ಆದಾಯದ ಬದಲು 700 ರೂ ಇದ್ದ ರಸಗೊಬ್ಬರ 2 ಸಾವಿರ ರೂ ಮುಟ್ಟಿದೆ. ಯಂತ್ರೋಪಕರಣಗಳ ಬಳಕೆ ವೆಚ್ಚ ಡಬಲ್ ಆಗಿರುವುದರ ಬಗ್ಗೆ ಏನು ಹೇಳುತ್ತೀರಿ ಮೋದಿಯವರೆ?
4. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ನೀವು ಹೇಳಿದ್ದಿರಿ, ಆದರೆ ರಾಜ್ಯದಲ್ಲಿ ಹಿಜಾಬ್, ಅಜಾನ್, ಹಲಾಲ್ ,ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪಸಂಖ್ಯಾತರ ಮೇಲೆ ನಿಮ್ಮ ಸಂಘಪರಿವಾರದವರೇ ಕೋಮು ದೌರ್ಜನ್ಯ ನಡೆಯುತ್ತಿದ್ದು, ಈ ವಿಚಾರದಲ್ಲಿ ನಿಮ್ಮ ನಿಲುವೇನು?
5. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸಲಿದೆ ಎಂದು ಬೀಗಿದ್ದಿರಿ ಅಲ್ಲವೇ? ರಾಜ್ಯದಲ್ಲಿ ನಿಮ್ಮ ಸರ್ಕಾರದ 5 ವರ್ಷದ ಸಾಧನೆ ಪಟ್ಟಿ ನೀಡುವಿರಾ?
6. ಕೋವಿಡ್ ಸಮಯದಲ್ಲಿ ಚಾಮರಾಜ ನಗರದಲ್ಲಿ 34 ಮಂದಿ ಆಕ್ಸಿಜನ್ ಇಲ್ಲದೆ ಸತ್ತರು? ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ಗೆ ಬಲಿಯಾಗಿದ್ದರೂ 40 ಸಾವಿರ ಎಂದು ಸುಳ್ಳು ಲೆಕ್ಕ ತೋರಿಸಿದ್ದು ಯಾಕೆ?
7. ಮೈಸೂರಿನಲ್ಲಿ 12 ಸಾವಿರಕ್ಕೂ ಹೆಚ್ಚು ಜನರ ಜತೆ ಯೋಗ ಮಾಡಲಿದ್ದೀರಿ. ನಿಮ್ಮ ಕಾರ್ಯಕ್ರಮಗಳಿಂದ ಕೊರೊನಾ ಹರಡುವುದಿಲ್ಲವೇ?
9. ಬೆಂಗಳೂರಿನಲ್ಲಿ 8 ಸಚಿವರಿದ್ದು ಅವರು ಪ್ರಧಾನಿ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರೂ ನಗರದ ರಸ್ತೆಗಳೆಲ್ಲ ಗುಂಡಿ ಬಿದ್ದಿವೆ. ನೆರೆ ಬಂದಾಗಲೂ ಈ ಸಚಿವರು ತಮ್ಮ ಕ್ಷೇತ್ರ ಬಿಟ್ಟು ಹೊರಬರಲಿಲ್ಲ. ಆಡಳಿತ ನಡೆಸುವುದು ಅಂದರೆ ಇದೇನಾ?
10. ಮೇಕೆದಾಟು ಹಾಗೂ ಮಹದಾಯಿ ನಮ್ಮ ರಾಜ್ಯಕ್ಕೆ ಅಗತ್ಯವಿರುವ ಎರಡು ಪ್ರಮುಖ ನೀರಾವರಿ ಯೋಜನೆಗಳು. ಈ ಯೋಜನೆಗೆ ಯಾವಾಗ ಅನುಮತಿ ಕೊಡಿಸುವಿರಿ? ಈ ಬಗ್ಗೆ ನಿಮ್ಮ ಸ್ಪಷ್ಟ ನಿಲುವು ತಿಳಿಸಿ.
11. ಅಗ್ನಿಪಥ್ ಯೋಜನೆಯಡಿ 17 ರಿಂದ 23 ವಯೋಮಿತಿಯವರನ್ನು ಸೇನೆಗೆ 4 ವರ್ಷಗಳ ಕಾಲಕ್ಕೆ ತೆಗೆದುಕೊಂಡು ನಂತರ ಮನೆಗೆ ಕಳಿಸುತ್ತಾರೆ. ನಾಲ್ಕು ವರ್ಷದ ನಂತರ ಅವರಿಗೆ ಉದ್ಯೋಗವೂ ಇಲ್ಲ. ಪಿಂಚಣಿ ಹಾಗೂ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಸರಿಯಾಗಿ ಶಿಕ್ಷಣವೂ ಆಗುವುದಿಲ್ಲ. ಅಲ್ಲಿಂದ ಬಂದವರಿಗೆ ಉದ್ಯೋಗ ಯಾರು ನೀಡುತ್ತಾರೆ?
ಕೇಂದ್ರ ಸರ್ಕಾರದ 60 ಲಕ್ಷ ಉದ್ಯೋಗಗಳು ಖಾಲಿ ಇದ್ದು ಕಳೆದ 3 ವರ್ಷದಿಂದ ಸೇನೆಯಲ್ಲೂ ನೇಮಕಾತಿ ಮಾಡಿರಲಿಲ್ಲ. ಇದು ಉದ್ಯೋಗವಲ್ಲ, ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದಲ್ಲಿ ಯೋಧರನ್ನು ನೇಮಿಸಿಕೊಳ್ಳುವಂತಾಗುತ್ತದೆ. ಮೋದಿ ಮತ್ತು ಅಮಿತ್ ಶಾ ಅವರು ಮುಂದು ಏನೆಲ್ಲಾ ಹೊಸ ಕ್ರಮಗಳನ್ನು ತರುತ್ತಾರೊ ಗೊತ್ತಿಲ್ಲ. ಎಲ್ಲಾ ಕಡೆ ಇದೇ ರೀತಿ ಮಾಡುತ್ತಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.