Sunday, December 22, 2024
Google search engine
Homeಜಿಲ್ಲೆತುಮಕೂರು - ಗುಬ್ಬಿಯ ದೊಡ್ಡಗುಣಿ ಸಮೀಪ ಅಪಘಾತ - ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು – ಗುಬ್ಬಿಯ ದೊಡ್ಡಗುಣಿ ಸಮೀಪ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ಕೆಎಸ್ಆರ್.ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಸಮೀಪ ನಡೆದಿದೆ.

ಮೃತರನ್ನು ಗಿರೀಶ್ (37) ಮತ್ತು ಮಾನ್ಯ (17) ಎಂದು ಗುರುತಿಸಲಾಗಿದೆ. ಈ ಇಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗುಬ್ಬಿ ತಾಲ್ಲೂಕು ದೊಡ್ಡಗುಣಿ ಸಮೀಪ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಗುಬ್ಬಿ ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular