Sunday, December 22, 2024
Google search engine
Homeಮುಖಪುಟಅಗ್ನಿಪಥ ಯೋಜನೆ ವಿರುದ್ಧ ನಿರಂತರ ಹೋರಾಟ - ಡಿ.ಕೆ.ಶಿವಕುಮಾರ್

ಅಗ್ನಿಪಥ ಯೋಜನೆ ವಿರುದ್ಧ ನಿರಂತರ ಹೋರಾಟ – ಡಿ.ಕೆ.ಶಿವಕುಮಾರ್

ಅಗ್ನಿಪಥ ಯೋಜನೆ ಖಂಡಿಸಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ಮುಟ್ಟಿಸಬೇಕು ಎಂದು ತಿಳಿಸಿದ್ದಾರೆ.

ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆಗೆ ಉತ್ತರಿಸಿದ ಅವರು ಸರ್ಕಾರ ಏನಾದರೂ ಹೇಳಲಿ, ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ. ಬೇಕಿದ್ದರೆ ಬಿಜೆಪಿ ನಾಯಕರ ಮಕ್ಕಳು ಅಗ್ನಿಪಥ ಮೂಲಕ ಸೇನೆ ಸೇರಲಿ ಎಂದರು.

ಬಿಜೆಪಿ ಮುಖಂಡರ ಮಕ್ಕಳು ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು. ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ, ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಬೇಕು. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಮಾಜಿ ಸಚಿವ ಸೀತಾರಾಮ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಪಕ್ಷದ ಹಿರಿಯ ನಾಯಕರು. ಅವರು ಶಾಸಕರಾಗಿದ್ದು ಮಂತ್ರಿಯಾಗಿದ್ದರು. ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು. ಪಕ್ಷ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಟ್ಟಿತ್ತು. ಆದರೆ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಬಾರಿ ವಿಧಾನ ಪರಿಷತ್ 2 ಸ್ಥಾನಗಳ ಪೈಕಿ ಹಿರಿಯರಾದ ನಾಸಿರ್ ಹಾಗೂ ಬಿಕೆ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಹೇಳಿದರು.

ಸೀತಾರಾಮ್ ಕಾಂಗ್ರೆಸ್ ಪಕ್ಷದಲ್ಲೇ ಇದ್ದಾರೆ. ಬಿಜೆಪಿಯರು ಯಾರನ್ನೂ ಬಿಡುವುದಿಲ್ಲ. ಬಿಜೆಪಿಯವರು ಯಾವ ರೀತಿ ಪ್ರಯತ್ನಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಿಂದ ಯಾರನ್ನು ಕಳುಹಿಸಿದ್ದರು ಎಂಬ ಮಾಹಿತಿ ನನ್ನ ಬಳಿ ಇದೆ. ಅವರದು ಬಹಳ ಗೌರವಯುತ ಕುಟುಂಬ. ಅವರು ಈ ರೀತಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular