ಸ್ವಚ್ಚತಾ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದೆ.
ನೇರಪಾವತಿ, ಹೊರಗುತ್ತಿಗೆ, ಮನೆಮನೆ ಕಸ ಸಂಗ್ರಹಿಸುವ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗಗಳ ಸ್ಚಚ್ಚತಾ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಸ್ವಚ್ಚತಾ ಕಾರ್ಮಿಕರಲ್ಲಿ ವಿಂಗಡಣೆ ಮಾಡುವುದನ್ನು ಕೈಬಿಟ್ಟು ಎಲ್ಲಾ ಕಾರ್ಮಿಕರು ಹಾಗೂ ನೀರುಸರಬರಾಜು ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂ ಮಾಡಬೇಕು ಎಂದು ಸಫಾಯಿ ಕರ್ಮಾಚಾರಿಗಳ ಸಂಘ ಒತ್ತಾಯಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಸ್ವಚ್ಛತಾ ಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ, ರಜೆ, ಬಾಲವಾಡಿ, ವಿಶ್ರಾಂತಿ ಗೃಹದಂತಹ ಅತ್ಯವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಡ್ಡಾಯವಾಗಿ ರಾಜ್ಯದ ಎಲ್ಲಾ ಕಡೆ ನೀಡಲೇಬೇಕು ಎಂದು ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸ್ವಚ್ಚತಾ ಕಾರ್ಮಿಕರಿಗೆ ಜಾರಿ ಮಾಡಿರುವ ಗೃಹಭಾಗ್ಯ ಯೋಜನೆಯನ್ನು ಕೇವಲ ಕಾಯಂ ಸ್ಚಚ್ಚತಾ ಕಾರ್ಮಿಕರಿಗೆ ಸೀಮಿತ ಮಾಡಿ ಶೇ.85ಷ್ಟು ಇರುವ ಸ್ವಚ್ಚತಾ ಕಾರ್ಮಿಕರಿಗೆ ತಾರತಮ್ಯ ಮಾಡಲಾಗಿದೆ ಎಂದು ದೂರಲಾಗಿದೆ.
ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆಮನೆ ಕಸ ಸಂಗ್ರಹ ಮಾಡುವ ಕಾರ್ಮಿಕರು ಒಳಚರಂಡಿ ಸ್ವಚ್ಚತಾ ಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಹಣಕಾಸಿನ ನೆರವು ನೀಡಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.