ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸ, ಗೆಸ್ಟ್ ಹೌಸ್ ಮತ್ತು ಕಚೇರಿಗಳ ಮೇಲೆ ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದಾಶಿವನಗರದ ಗೆಸ್ಟ್ ಹೌಸ್, ನಿವಾಸ ಮತ್ತು ಪ್ಲಾಟ್ ಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ತಪಾಸಣೆ ಮಾಡುತ್ತಿದ್ದಾರೆ.
ಜಾರಿ ನಿರ್ದೇಶನಾಲಯ ದೂರು ದಾಖಲಿಸಿದ ಬಳಿಕ ಎಂಟು ಮಂದಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ.


