ಮಹಾರಾಷ್ಟ್ರದಲ್ಲಿ ಈಗ ಮಧ್ಯಂತರ ಚುನಾವಣೆ ನಡೆದರೆ ಉದ್ದವ್ ಠಾಕ್ರೆ ನೇತೃತ್ವದ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದು ಬಂಡಾಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ವಾಗ್ದಾಳಿ ನಡೆಸಿದ ರಾವತ್ ಹಣಬಲ ಮತ್ತು ಕೇಂದ್ರದ ಏಜೆನ್ಸಿಗಳ ಮೂಲಕ ಒತ್ತಡ ಹೆಚ್ಚಿಸುವ ಮೂಲಕ ಶಿವಸೇನೆಯನ್ನು ಹೈಜಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಂಡಾಯಗಾರರ ವಿರುದ್ಧ ಆಕ್ರೋಶ ಹೊರಹಾಕಿರುವ ಸಂಜಯ್ ರಾವತ್ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಶಿವಸೇನೆ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಶಾಸಕರೊಬ್ಬರು ಪಕ್ಷ ತೊರೆದರೆ ಶಿವಸೇನೆ ತನ್ನ ಮತದಾರರನ್ನು ಕಳೆದುಕೊಂಡಿದೆ ಎಂದಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹೊಸದಾಗಿ ಆಯ್ಕೆಯಾದ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರನ್ನು ತರಾಟೆಗೆ ತೆಗೆದುಕೊಂಡ ರಾವತ್ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಮೂಲ ಪಕ್ಷವಾಗಿದ್ದು,ಪಕ್ಷದ ಶಾಸಕರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಂಡರೆ ಅವರು ತಮ್ಮ ಕಾನೂನು ಪದವಿಯನ್ನು ಹಿಂದಿರುಗಿಸಬೇಕು ಎಂದು ಹೇಳಿದ್ದಾರೆ.


